2023 ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಮತ್ತು ಫಲಿತಾಂಶದ ದಿನಾಂಕ ಪ್ರಕಟಿಸಿದ ಚುನಾವಣಾ ಆಯೋಗ

 2023ರ ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ನವೆಂಬರ್ 7ರಂದು ಆರಂಭವಾಗಿ, ಡಿಸೆಂಬರ್ 3ರಂದು ಫಲಿತಾಂಶ ಪ್ರಕಟವಾಗಲಿದೆ.

ಇಂದು ಈ ಕುರಿತಂತೆ ಚುನಾವಣಾ ಆಯೋಗ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ  ಅಧಿಕಾರಿಗಳು ಚುನಾವಣೆಯ ಕುರಿತಂತೆ ಮಾಹಿತಿ ನೀಡಿದರು. 




ಮಧ್ಯಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನ, ತೆಲಂಗಾಣ ಮತ್ತು ಮಿಜೋರಾಂ ಎಂಬ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಇಂದು ಪ್ರಕಟಿಸಿದೆ. ಪಂಚ ರಾಜ್ಯಗಳ ಚುನಾವಣೆ ಸುಗಮವಾಗಿ ನಡೆಯಲು ಕಾರ್ಯತಂತ್ರ ರೂಪಿಸಲು ಚುನಾವಣಾ ಆಯೋಗ ಶುಕ್ರವಾರ ವೀಕ್ಷಕರ ಸಭೆ ನಡೆಸಿದೆ. 

ಛತ್ತೀಸ್‌ಗಢದಲ್ಲಿ ನವೆಂಬರ್ 7 ಮತ್ತು ನವೆಂಬರ್ 17 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮಧ್ಯಪ್ರದೇಶದಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ, ನವೆಂಬರ್ 17 ರಂದು ಛತ್ತೀಸ್‌ಗಢದಲ್ಲಿ ಎರಡನೇ ಹಂತದ ಮತದಾನ ನಡೆಯಲಿದೆ.


ರಾಜಸ್ಥಾನ ಮತ್ತು ತೆಲಂಗಾಣದಲ್ಲಿ ಕ್ರಮವಾಗಿ ನವೆಂಬರ್ 23 ಮತ್ತು ನವೆಂಬರ್ 30 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಮಧ್ಯಪ್ರದೇಶದ ವಿಧಾನಸಭಾ ಚುನಾವಣೆಗಳು ನವೆಂಬರ್ 17 ರಂದು ನಡೆಯಲಿದೆ. ಮಿಜೋರಾಂನಲ್ಲಿ ವಿಧಾನಸಭಾ ಚುನಾವಣೆಗಳು ನವೆಂಬರ್ 7 ರಂದು ನಡೆಯಲಿದೆ. ಎಲ್ಲಾ ರಾಜ್ಯಗಳ ಫಲಿತಾಂಶ ಡಿಸೆಂಬರ್ 3ರಂದು ಪ್ರಕಟಗೊಳ್ಳಲಿದೆ. 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ರಾಮಮಂದಿರದ ವಿಶೇಷತೆ ಕುರಿತಂತೆ ನೀವು ತಿಳಿದುಕೊಳ್ಳಬೇಕಾದ ವಿಚಾರಗಳು

ಅಕ್ಟೋಬರ್ 31, 1984ರ ಆ ಘಟನೆಯ ಬಳಿಕ ಇಂದಿರಾಗಾಂಧಿಯವರಲ್ಲಿ ಕಾಣಿಸಿಕೊಂಡಿತ್ತಂತೆ ಈ ವಿಚಿತ್ರ ಬದಲಾವಣೆ..!

ಅಜಿನೋಮೋಟೋ ಎಂದರೇನು? ದೇಹದ ಮೇಲೆ ಇದು ಬೀರುವ ಪರಿಣಾಮ ಹೇಗಿರುತ್ತೆ?